ರಾಮನಗರ : ಡಿಸಿಎಂ ಅಶ್ವಥ್ನಾರಾಯಣ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಬಿಜೆಪಿ ಕಾರ್ಯಕರ್ತ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. ಮಾಗಡಿ ತಾಲೂಕಿನಲ್ಲಿ ಬಿಜೆಪಿ ಸೇರ್ಪಡೆ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ವೇಳೆ ಬಿಜೆಪಿ ಕಾರ್ಯಕರ್ತ ಶಿವರಜ್ ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಆದರೆ ವೇದಿಕೆ ಮೇಲೆಯೇ ಹೃದಯಾಘಾತವಾಗಿ ಮೇಲಿಂದಲೇ ಕುಸಿದು ಬಿದಿದ್ದಾರೆ. ತಕ್ಷಣವೇ ಶಿವರಾಜ್ನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗದಲ್ಲೇ ಮೃತಪಟ್ಟಿದ್ದಾರೆ ವರದಿ-ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು
Read MoreCategory: ರಾಮನಗರ
ಮುತ್ತಪ್ಪ ರೈ ಪುತ್ರನ ಮನೆ ಮೇಲೆ ಸಿಸಿಬಿ ದಾಳಿ..!
ರಾಮನಗರ: ದಿವಂಗತ ಮುತ್ತಪ್ಪ ರೈ ಮಗನ ಮನೆ ಮೇಲೆ ಬೆಳ್ಳಂಬೆಳಗ್ಗೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮುತ್ತಪ್ಪ ರೈಗೆ ಸೇರಿದ ಬಿಡದಿ ಮನೆ ಹಾಗು ವಯ್ಯಾಲಿಕಾವಲ್ ಮನೆ ಸೇರಿದಂತೆ ಹಲವೆಡೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಪುತ್ರ ರಿಕ್ಕಿ ಮನೆ ಮೇಲು ದಾಳಿ ಮಾಡಲಾಗಿದ್ದು,ಶೋಧಕಾರ್ಯ ನಡೆಸಲಾಗುತ್ತಿದೆ. ಪುತ್ರ ರಿಕ್ಕಿ ಡ್ರಗ್ ಪೆಡ್ಲರ್ ಜೊತೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆನ್ನಲಾಗಿದೆ. ವರದಿ- ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು
Read Moreಕೊರೊನಾ ಪಾಸಿಟೀವ್ ಹಿನ್ನೆಲೆ ವ್ಯಕ್ತಿ ನೇಣಿಗೆ ಶರಣು..!
ರಾಮನಗರ:ಕಳೆದ ನಾಲ್ಕು ದಿನಗಳ ಹಿಂದೆ ಚನ್ನಪಟ್ಟಣ ತಾಲ್ಲೂಕಿನ ಹುಟ್ಟಿಗಾನ ಹೊಸಹಳ್ಳಿ ಗ್ರಾಮದ 35 ವರ್ಷದ ವ್ಯಕ್ತಿಗೆ ಕೊರೊನಾ ಪಾಸಿಟೀವ್ ಕಾಣಿಸಿಕೊಂಡಿತ್ತು.ಆತನನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಸೋಂಕಿನಿಂದ ಮನನೊಂದಿದ್ದ ವ್ಯಕ್ತಿ ಸೋಮವಾರ ತಡರಾತ್ರಿ ಕೊವಿಡ್ ಆಸ್ಪತ್ರೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚನ್ನಪಟ್ಟಣ ತಾಲ್ಲೂಕಿನ ಹೊನ್ನಾಯಕನಹಳ್ಳಿಯ ಕೋವಿಡ್ ಆಸ್ಪತ್ರೆಯಲ್ಲಿ ನಡೆದಿದೆ.ಇನ್ನೂ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಪೋಲಿಸರ ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ವರದಿ-ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು..
Read Moreಡಿಕೆಶಿ ಮಾತಿಗೆ ಟಾಂಗ್ ಕೊಟ್ಟ ಸಿ.ಪಿ ಯೋಗೇಶ್ವರ್..!
ರಾಮನಗರ: ರಾಜಕೀಯ ನಾಯಕರ ಟೆಲಿಫೋನ್ ಕದ್ದಾಲಿಕೆ ವಿಚಾರ ಮತ್ತೆ ಗಂಭೀರ ಸ್ವರೂಪ ಪಡೆದುಕೊಂಡಿದೆ. ಕೆಲ ದಿನಗಳ ಹಿಂದೆ ತಮ್ಮ ದೂರವಾಣಿ ಕದ್ದಾಲಿಗೆ ಆಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದ್ದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಫೋನ್ ಕದ್ದಾಲಿಕೆ ಆರೋಪಕ್ಕೆ ಮಾಜಿ ಸಚಿವ, ಎಂಎಲ್ಸಿ ಸಿ.ಪಿ ಯೋಗೇಶ್ವರ್ ಪ್ರತಿಕ್ರಿಯಿಸಿದ್ದು, ಚನ್ನಪಟ್ಟಣದಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್, ಡಿ.ಕೆ ಶಿವಕುಮಾರ್ ಒಬ್ಬ ಕಳ್ಳ, ಕಳ್ಳ ಮನಸ್ಸು ಉಳ್ಳುಗೆ ಎಂದು ಡಿ.ಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.ಡಿ.ಕೆ ಶಿವಕುಮಾರ್ ಅವರೇ ಒಬ್ಬ ಕಳ್ಳ, ಇನ್ನೊಬ್ಬರ ಮೇಲೆ ಆರೋಪ ಮಾಡೋದು ಏನಿದೆ. ಅವರ ಫೋನ್ ಕದ್ದಾಲಿಕೆ ಮಾಡಿ ಯಾವ ರಾಜ್ಯ ಗೆಲ್ಲಬೇಕು. ಈ ಹಿಂದೆ ಅವರೇ ಟ್ಯಾಪಿಂಗ್ ಮಾಡಿಸಿ ನನ್ನ ಮೇಲೆಯೇ ಫೋನ್ ಕದ್ದಾಲಿಕೆ ಆರೋಪ ಮಾಡಿದ್ದರು. ಜನರ ಗಮನ ಬೇರೆಕಡೆ ಸೆಳೆಯುವ ಪ್ರಯತ್ನ ಡಿ.ಕೆ.ಶಿ…
Read Moreಖಾಸಗಿ ಬಸ್ ರಸ್ತೆಗಿಳಿಯೋದು ಇನ್ನೂ ಅನುಮಾನ..
ತುಮಕೂರು:ಕೊರೊನಾ ವೈರಸ್‌ನಿಂದ ಲಾಕ್‌ಡೌನ್ ಆಗಿರುವ ಹಿನ್ನಲೆಯಲ್ಲಿ ಖಾಸಗಿ ಬಸ್ ಮಾಲೀಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದು, ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸಿದರೆ ಮಾತ್ರ ಖಾಸಗಿ ಬಸ್‌ಗಳು ರಸ್ತೆಗೆ ಇಳಿಯಲಿವೆ ಎಂದು ೧೪ ಜಿಲ್ಲೆಗಳ ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷರುಗಳು ತಿಳಿಸಿದ್ದಾರೆ. ನಗರಕ್ಕೆ ಸಮೀಪದ ಹಿರೇಹಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಖಾಸಗಿ ಬಸ ಮಾಲೀಕರ ಸಂಘದ ತುಮಕೂರು ಜಿಲ್ಲಾಧ್ಯಕ್ಷ ಬಿ.ಎಸ್. ಬಲಶಾಮಸಿಂಗ್,ನಮ್ಮ ಜಿಲ್ಲೆಯೂ ಸೇರಿದಂತೆ ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು, ಚಿಕ್ಕಮಗಳೂರು, ಚಾಮರಾಜನಗರ ಸೇರಿದಂತೆ ೧೪ ಜಿಲ್ಲೆಗಳ ಖಾಸಗಿ ಬಸ್ ಮಾಲೀಕರ ಸಂಘದ ಜಿಲ್ಲಾಧ್ಯಕ್ಷರು ಸೇರಿ ಇಂದು ಸಭೆ ನಡೆಸಲಾಗಿದೆ.ಸಭೆಯಲ್ಲಿ ಒಮ್ಮತ ತೀರ್ಮಾನಕ್ಕೆ ಬಂದು ನಮ್ಮ ಬೇಡಿಕೆಗಳ ಈಡೇರಿಕೆಗೆ ಸರ್ಕಾರಕ್ಕೆ ಒಕ್ಕೊರಲ ಮನವಿ ಸಲ್ಲಿಸಲಾಗುವುದು ಎಂದರು. ಕೋವಿಡ್-೧೯ ನಿಂದ ಮಾ.೨೪ರಿಂದಲೇ ಸಾರಿಗೆ ಪ್ರಾಧಿಕಾರದ ಆದೇಶದಂತೆ ಖಾಸಗಿ ಬಸ್‌ಗಳನ್ನು ನಿಲ್ಲಿಸಲಾಗಿದೆ.…
Read Moreಭಾರೀ ಮಳೆಗೆ ಬೆಳೆ ನಾಶ..ರೈತರಿಗೆ ಆದಷ್ಟು ಶೀಘ್ರ ಪರಿಹಾರ..
ರಾಮನಗರ :ಕಳೆದ ಎರಡು ದಿನಗಳಿಂದ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಬಿಡದಿಯಲ್ಲಿ ಸುರಿದ ಭಾರೀ ಮಳೆಗೆ ಬೆಳೆ ನಾಶವಾಗಿದೆ. ಸದ್ಯ ವಿಷಯ ತಿಳಿದು ಸಂಸದ ಡಿ.ಕೆ ಸುರೇಶ್ ,ಮಾಗಡಿ ಶಾಸಕ ಎ .ಮಂಜುನಾಥ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಬೆಳೆ ನಾಶಗೊಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ರೈತರ ಜೊತೆ ಚರ್ಚೆ ನಡೆಸಿದ ಸಂಸದ ಡಿ.ಕೆ ಸುರೇಶ್, ಆದಷ್ಟು ಬೇಗ ಪರಿಹಾರ ಕೂಡಿಸುವುದಾಗಿ ರೈತರಿಗೆ ಭರವಸೆ ನೀಡಿದರಲ್ಲದೆ,ಈ ಸಂಬAಧ ಅಲ್ಲೇ ಇದ್ದ ಅಧಿಕಾರಿಗಳಿಗೆ ಸೂಚನೆ ಕೂಡ ನೀಡಿದರು. ಸಿ.ಕಾರ್ತಿಕ್ ಗೌಡ ಎಕ್ಸ್ ಪ್ರೆಸ್ ಟಿವಿ ರಾಮನಗರ
Read Moreಅಗಲಿದ ಪತ್ರಕರ್ತನಿಗೆ ಭಾವಪೂರ್ಣ ಶ್ರದ್ಧಾಂಜಲಿ
ಲಿ0ಗಸೂಗೂರು(ರಾಯಚೂರು):ಪಾದರಾಯನಪುರ ಗಲಭೆಯ ಆರೋಪಿಗಳನ್ನು ರಾಮನಗರದ ಕಾರಾಗೃಹಕ್ಕೆ ಕರೆ ತಂದ ಬಗ್ಗೆ ಸುದ್ದಿ ಮಾಡಿ ಬರುತ್ತಿದ್ದ ಸಂದರ್ಭದಲ್ಲಿ ಹಿಂದಿನಿ0ದ ಬಂದ ಎಟಿಎಂಗೆ ಹಣ ತುಂಬುವ ವಾಹನ ಡಿಕ್ಕೆ ಹೊಡೆದ ಪರಿಣಾಮದಿಂದ ಖಾಸಗಿ ಸುದ್ದಿವಾಹಿನಿಯ ವರದಿಗಾರ ಹನುಮಂತು ನಿಧನ ಹೊಂದಿದ್ದರು. ಹೀಗಾಗಿ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಮುದಗಲ್ ಪತ್ರಕರ್ತರು ನಿನ್ನೆ ವರದಿಗಾರ ಹನಮಂತು ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಹಿರಿಯ ಪತ್ರಕರ್ತ ದೇವಪ್ಪ ರಾಠೋಡ್,ಖಾಸಗಿ ವಾಹಿನಿಯಲ್ಲಿ ಕಾರ್ಯನಿವಹಿಸುತ್ತಿದ್ದ ರಾಮನಗರದ ವರದಿಗಾರ ಹನುಮಂತು ನಮ್ಮನ್ನು ಬಿಟ್ಟು ಅಗಲಿದ್ದಾರೆ.ಅವರ ಆತ್ಮಕ್ಕೆ ಚಿರ ಶಾಂತಿ ದೊರಕಲಿ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಆ ದೇವರು ನೀಡಲಿ ಎಂದು ಪ್ರಾರ್ಥಿಸಿದರು. ನಂತರ ಮಾತನಾಡಿದ ಹಿರಿಯ ಪತ್ರಕರ್ತ ಶರಣಯ್ಯ ಬಿ ಒಡೆಯರ್,ಹನುಮಂತು ಒಬ್ಬ ಕ್ರಿಯಾಶೀಲ ಪತ್ರಕರ್ತ ಅವರ ಅಗಲಿಕೆಗೆ ದೃಶ್ಯ ಮಾಧ್ಯಮ ಹಾಗೂ ಪತ್ರಿಕಾ ಮಾಧ್ಯಮ ಕಂಬನಿ ಮಿಡಿದಿದೆ.ಪತ್ರಿಕಾಧರ್ಮವನ್ನು ಎತ್ತಿ…
Read Moreಕೊನೆಗೂ ಬೋನಿಗೆ ಬಿತ್ತು ಚಿರತೆ
ಮಾಗಡಿ(ರಾಮನಗರ):ಕಳೆದ ಕೆಲವು ದಿನಗಳಿಂದ ಜನರಲ್ಲಿ ಭಯ ಹುಟ್ಟಿಸಿದ್ದ ಸುಮಾರು ಮೂರೂವರೆ ವರ್ಷದ ಹೆಣ್ಣು ಚಿರತೆ ಕೊನೆಗೂ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿರುವ ಘಟನೆ ಮಾಗಡಿ ತಾಲೂಕಿನಲ್ಲಿ ನಡೆದಿದೆ. ಅಂದ ಹಾಗೇ ಮಾಗಡಿ ತಾಲೂಕಿನ ತಾಂಡೇನಪುರ ಗ್ರಾಮದ ಜನರಿಗೆ ಈ ಚಿರತೆ ಭಯ ಹುಟ್ಟಿಸಿತ್ತು.ಅಲ್ಲದೆ, ಜಾನುವಾರುಗಳ ಮೇಲೆ ಚಿರತೆ ದಾಳಿ ನಡೆಸಿದ್ದ ಹಿನ್ನೆಲೆಯಲ್ಲಿ ಜನರು,ರೈತರು ಹೊಲ, ಗದ್ದೆಗಳಿಗೂ ತೆರಳುವುದಕ್ಕೂ ಹೆದರುತ್ತಿದ್ದರು. ಇದಾದ ಬಳಿಕ ಅರಣ್ಯ ಇಲಾಖೆಗೆ ಗ್ರಾಮಸ್ಥರು ಚಿರತೆ ಹಿಡಿಯುವಂತೆ ಹಲವು ಬಾರಿ ಮನವಿ ಮಾಡಿದ್ದರು.ನಂತರ ಅರಣ್ಯ ಇಲಾಖೆ ಸಿಬ್ಬಂದಿ ಇಟ್ಟ ಬೋನಿಗೆ ಚಿರತೆ ಬಿದ್ದಿದ್ದು, ಆತಂಕದಲ್ಲಿದ್ದ ಜನರು ನಿಟ್ಟುಸಿರು ಬಿಡುವಂತಾಗಿದೆ. ನ್ಯೂಸ್ ಬ್ಯೂರೋ ಎಕ್ಸ್ ಪ್ರೆಸ್ ಟಿವಿ ರಾಮನಗರ
Read Moreಬೆಂಗಳೂರಿನ ಹಜ್ ಭವನಕ್ಕೆ ಪಾದರಾಯನಪುರದ ಪಾಪಿಗಳು ಶಿಫ್ಟ್
ಬೆಂಗಳೂರು : ರಾಮನಗರ ಜೈಲಿನಲ್ಲಿದ್ದ ಪಾದರಾಯನಪುರದ ಪಾಪಿಗಳ ಪೈಕಿ ೫ ಆರೋಪಿಗಳಿಗೆ ಜನರಿಗೆ ಕೊರೋನಾ ಬಂದಿರುವ ಹಿನ್ನಲೆಯಲ್ಲಿ ೧೧೬ ಮಂದಿ ಆರೋಪಿಗಳನ್ನು ಬೆಂಗಳೂರಿನ ಹಜ್ ಭವನಕ್ಕೆ ಶಿಫ್ಟ್ ಮಾಡಲಾಗಿದೆ. ರಾಮನಗರದಿಂದ ೭ ಬಸ್ ಗಳಲ್ಲಿ ಆರೋಪಿಗಳನ್ನು ಕರೆ ತರಲಾಗಿದ್ದು, ಇನ್ನುಳಿದ ೭ ಬಸ್ ಗಳಲ್ಲಿ ಪೊಲೀಸರು ಹಾಗೂ ಆರೋಗ್ಯ ಇಲಾಖೆಗಳು ಅಧಿಕಾರಿಗಳು ಬಂದಿದ್ದಾರೆ. ಜೈಲಿನಿ0ದ ಹೊರಡುವ ಮುನ್ನ ಎಲ್ಲಾ ಆರೋಪಿಗಳ ಆರೋಗ್ಯ ತಪಾಸಣೆಯನ್ನು ಕೂಡಾ ಮಾಡಲಾಗಿದೆ. ಕೊರೋನಾ ಸೋಂಕಿನ ಮುಂಜಾಗ್ರತ ಕ್ರಮವಾಗಿ ಈ ದುಷ್ಕರ್ಮಿಗಳು ಇಲ್ಲಿ ಕ್ವಾರಂಟೈನ್ ಅವಧಿಯನ್ನು ಕಳೆಯಲಿದ್ದಾರೆ. ಇನ್ನು ೧೧೬ ಆರೋಪಿಗಳ ಮೊದಲ ಲ್ಯಾಬ್ ರಿಪೋರ್ಟ್ ನೆಗೆಟಿವ್ ಎಂದು ಬಂದಿದರೂ ಕೂಡಾ ಆತಂಕ ದೂರವಾಗಿಲ್ಲ. ಹೀಗಾಗಿ ಕೆಎಸ್‌ಆರ್‌ಟಿಸಿ ಬಸ್ ಡ್ರೈವರ್ ಹಾಗೂ ಪೊಲೀಸ್ ಸಿಬ್ಬಂದಿಗೆ ಪಿಪಿಇ ಕಿಟ್ ಒದಗಿಸಲಾಗಿತ್ತು. ಮಾತ್ರವಲ್ಲದೆ ಎಲ್ಲಾ ಆರೋಪಿಗಳ ಕೈಗೆ ಕೋಳವನ್ನು ಕೂಡಾ ತೊಡಿಸಲಾಗಿತ್ತು. ಇನ್ನು ವೀಸಾ ಅವಧಿ ಮುಗಿದ…
Read Moreಬಂಧಿಖಾನೆ ಎಡಿಜಿಪಿ ವಿರುದ್ಧ ಹೆಚ್‌ಡಿಕೆ ಗರಂ..
ಮೈಸೂರು: ಪಾದರಾಯಪುರಪುರದ ಗಲಭೆ ಆರೋಪಿಗಳನ್ನು ರಾಮನಗರ ಜೈಲಿಗೆ ಸ್ಥಳಾಂತರಿಸಲಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಕುಮಾರಸ್ವಾಮಿ, ಇದರ ಹಿಂದೆ ಬಂಧಿಖಾನೆ ಎಡಿಜಿಪಿ ಅಲೋಕ್ ಮೋಹನ್ ಅವರ ಕೈವಾಡವಿದೆ ಎಂದು ಆರೋಪಿಸಿದ್ದಾರೆ. ಮೈಸೂರು ನಗರದಲ್ಲಿ ಮಾತನಾಡಿದ ಅವರು,ರಾಮನಗರ ಜೈಲಿಗೆ ಪಾದರಾಯನಪುರದ ಆರೋಪಿಗಳನ್ನು ಸ್ಥಳಾಂತರ ಮಾಡುವಲ್ಲಿ ಬಂಧಿಖಾನೆಯ ಎಡಿಜಿಪಿ ಅಲೋಕ್ ಮೋಹನ್ ಕೈವಾಡ ಇದೆ. ಅವರೇ ಆರೋಪಿಗಳನ್ನು ಸ್ಥಳಾಂತರ ಮಾಡಲು ಹೇಳಿದ್ದಾರೆ ಎಂದು ದೂರಿದರು. ನಾನು ಮುಖ್ಯಮಂತ್ರಿ ಆಗಿದ್ದ ಸಮಯದಲ್ಲಿ ಅಲೋಕ್ ಮೋಹನ್ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಆಗಲು ಒತ್ತಡ ಹೇರಿದ್ದರು. ಅದಕ್ಕೆ ನಾನು ಒಪ್ಪರಲಿಲ್ಲ. ನನ್ನ ಮೇಲಿನ ದ್ವೇಷಕ್ಕೆ ಈ ರೀತಿ ಮಾಡಿದ್ದಾರೆ ಎನಿಸುತ್ತಿದೆ. ನನ್ನ ಮೇಲಿನ ದ್ವೇಷಕ್ಕೆ ರಾಮನಗರ ಜನತೆ ಮೇಲೆ ಸೇಡು ತೀರಿಸಿಕೊಳ್ಳಲು ಹೊರಟಿದ್ದಾರೆ.ಈ ಬಗ್ಗೆ ಸರ್ಕಾರ ತನಿಖೆ ನಡೆಸಬೇಕು. ಈ ಆರೋಪಿಗಳನ್ನು ಕರೆದುಕೊಂಡು ಬಂದ ಎಲ್ಲಾ ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಬೇಕು. ರಾಮನಗರದ…
Read More