ರಾಯಚೂರು(ಲಿಂಗಸೂಗೂರು): ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಬಯ್ಯಾಪೂರ ಗ್ರಾಮದ ಆಶಾ ಕಾರ್ಯಕರ್ತೆ ಅಂಬುಜಾ ಮೇಲೆ ಹಲ್ಲೆ ಮಾಡಿದ ಆರೋಪಿಗಳನ್ನು ಬಂಧಿಸಬೇಕೆAದು ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷೆ ರೂಪಾ ಶ್ರೀನಿವಾಸ ನಾಯಕ ಒತ್ತಾಯಿಸಿದ್ದಾರೆ. ಅಂದ ಹಾಗೇ ಬಯ್ಯಾಪೂರ ಗ್ರಾಮಕ್ಕೆ ಮತ್ತು ಮುದಗಲ್ ಠಾಣೆಗೆ ಭೇಟಿ ವೇಳೆ ಮಾತನಾಡಿದ ರೂಪಾ ಶ್ರೀನಿವಾಸ ನಾಯಕ, ಬಯ್ಯಾಪೂರ ಗ್ರಾಮದಲ್ಲಿ ಮಹಿಳೆ ಅಂಬುಜಾಗೆ ಯಾರು ಇಲ್ಲ.ಸದ್ಯ ಈ ಮಹಿಳೆ ಮೇಲೆ ಅದೇ ಗ್ರಾಮದ ಹನುಮನಗೌಡ ಹಾಗೂ ಆತನ ಕುಟುoಬಸ್ಥರು ಮಹಿಳೆ ಮೇಲೆ ಹಲ್ಲೆ ಮಾಡಿದ್ದಾರೆ.ಈ ಸಂಬAಧ ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಹೀಗಾಗಿ ಮಹಿಳೆಯ ಸುರಕ್ಷತೆಗಾಗಿ ಕೂಡಲೇ ಪೊಲೀಸ್ ಇಲಾಖೆ ಅಧಿಕಾರಿಗಳು ತನಿಖೆ ಮಾಡಿ ಆರೋಪಿಗಳನ್ನು ಬಂಧಿಸಬೇಕು ಅಂತ ಆಗ್ರಹಿಸಿದ್ರು.. ವೀರೇಶ್ ಅರಮನಿ ಎಕ್ಸ್ ಪ್ರೆಸ್ ಟಿವಿ (ಲಿಂಗಸೂಗೂರು) ರಾಯಚೂರು
Read MoreCategory: Breaking News
ಸಿಡಿಲು ಬಡಿದು ನಾಲ್ವರ ಸಾವು
ವಿಜಯನಗರ ಜಿಲ್ಲೆಯ ಕೂಡ್ಲಗಿ ತಾಲ್ಲೂಕಿನ ವಿವಿಧ ಪ್ರದೇಶಗಳಲ್ಲಿ ಸಿಡಿಲು ಬಡಿದು ನಾಲ್ವರು ಸಾವನ್ನಪ್ಪಿದ್ದಾರೆ.ಮೊದಲ ಘಟನೆಯಲ್ಲಿ ಮೃತರನ್ನು ಚೆನ್ನಾಪುರಿ ಮತ್ತು ವೀರಣ್ಣ ಎಂದು ಗುರುತಿಸಲಾಗಿದ್ದು, ಹೊಲಗಳಲ್ಲಿ ದನ ಮೇಯಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಮತ್ತೊಂದು ಘಟನೆಯಲ್ಲಿ, ಹರವಡಹಳ್ಳಿಯ ಜರ್ಮಹಳ್ಳಿ ಮಾಜಿ ಗ್ರಾಮ ಪಂಚಾಯತ್ ಸದಸ್ಯ ರಾಜಶೇಖರ್ ತಮ್ಮ ಕೃಷಿ ಜಮೀನಿನಿಂದ ಹಿಂದಿರುಗುವಾಗ ಸಿಡಿಲು ಬಡಿದು ಸಾವನ್ನಪ್ಪಿದ್ದು, ಆತನ ಜೊತೆಗಿದ್ದ ಮತ್ತೊಬ್ಬ ವ್ಯಕ್ತಿ ಗಾಯಗೊಂಡಿದ್ದಾನೆ. ಮೂರನೇ ಘಟನೆಯಲ್ಲಿ, ಅಯ್ಯನಹಳ್ಳಿ ಗ್ರಾಮದ ಪತ್ರೆಪ್ಪ ತನ್ನ ಕಿರಾಣಿ ಅಂಗಡಿ ಬಾಗಿಲು ಮುಚ್ಚುತ್ತಿದ್ದಾಗ ಸಿಡಲು ಬಡಿದು ಸಾವನ್ನಪ್ಪಿದ್ದಾರೆ. ತಹಶೀಲ್ದಾರ್ ಮಹಾಬಲೇಶ್ವರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
Read More“ರಾಜ್ಯದಲ್ಲಿ ಉತ್ಪಾದನೆ ಆಗುವ ಆಕ್ಸಿಜನ್ ಇಲ್ಲೇ ಬಳಕೆಯಾಗ್ಬೇಕು”
ಆಕ್ಸಿಜನ್ ಸರಬರಾಜು ಬಗ್ಗೆ ಸಭೆ ನಡೆಸಿದ್ದೇವೆ. ಟಾಸ್ಕ್ ಫೋರ್ಸ್ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ರು. ಹಲವು ಸೂಚನೆ ನೀಡಲಾಗಿದೆ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ನಮ್ಮ ರಾಜ್ಯದಲ್ಲಿ ಉತ್ಪಾದನೆ ಆಗುವ ಆಕ್ಸಿಜನ್ ನಮ್ಮಲ್ಲೇ ಬಳಕೆ ಆಗುವಂತೆ ಆಗಬೇಕು. ಈ ಬಗ್ಗೆ ಕೇಂದ್ರ ಸಚಿವ ಪಿಯೂಶ್ ಘೋಯಲ್ ಜೊತೆ ಮಾತುಕತೆ ಮಾಡಿದ್ದೇನೆ ಎಂದಿದ್ದಾರೆ.
Read Moreಕೇಂದ್ರಕ್ಕೆ ಛೀಮಾರಿ ಹಾಕಿದ ಸುಪ್ರೀಂ ಕೋರ್ಟ್
ರಾಜಧಾನಿ ದೆಹಲಿಯಲ್ಲಿ ಆಮ್ಲಜನಕದ ಬಿಕ್ಕಟ್ಟು ಮುಂದುವರೆದಿದೆ. ಕಳೆದ ಹಲವು ದಿನಗಳಿಂದ ದೆಹಲಿ ಹೈಕೋರ್ಟ್ ನಲ್ಲಿ ಈ ಬಗ್ಗೆ ವಿಚಾರಣೆ ನಡೆಯುತ್ತಿದೆ. ಹೈಕೋರ್ಟ್ ಪ್ರತಿ ವಿಚಾರಣೆಯಲ್ಲಿ ಆಮ್ಲಜನಕವನ್ನ ನಿಯಮಿತವಾಗಿ ಪೂರೈಸಲು ನಿರ್ದೇಶನ ನೀಡುತ್ತಿತ್ತು. ಆದ್ರೆ, ಅದು ಕಾರ್ಯರೂಪಕ್ಕೆ ಬಂದಿಲ್ಲ. ಹಾಗಾಗಿ ಇಂದು ಸುಪ್ರೀಂ ಕೋರ್ಟ್ ಸೋಮವಾರದೊಳಗೆ ಆಮ್ಲಜನಕ ಪೂರೈಸುವಂತೆ ತನ್ನ ಆದೇಶದಲ್ಲಿ ಸೂಚಿಸಿದೆ. ದೆಹಲಿಗೆ 700 ಮೆಟ್ರಿಕ್ ಟನ್ ಆಮ್ಲಜನಕ ಪೂರೈಕೆಗೆ ಸುಪ್ರೀಂ ಕೋರ್ಟ್ ಆದೇಶ ನೀಡಿಲ್ಲ ಎಂದು ಕೇಂದ್ರವು ದೆಹಲಿ ಹೈಕೋರ್ಟ್ʼನಲ್ಲಿ ಏಕೆ ಹೇಳಿದೆ ಎಂದು ನ್ಯಾಯಾಲಯ ಪ್ರಶ್ನಿಸಿದೆ. ಆದೇಶವನ್ನ ಪಾಲಿಸುವುದು ಮತ್ತು ವಿಫಲ ಅಧಿಕಾರಿಗಳನ್ನ ಜೈಲಿಗೆ ಹಾಕುವುದು ಕೇಂದ್ರದ ಜವಾಬ್ದಾರಿ ಎಂದು ಹೇಳಿದೆ. ಇದೇ ವೇಳೆ, 10ರಂದು ಮತ್ತೆ ಪ್ರಕರಣದ ವಿಚಾರಣೆ ನಡೆಸಲಿದ್ದು, ನಂತರ ರಾಜ್ಯ ಸರ್ಕಾರದ ಸನ್ನದ್ಧತೆಯ ಬಗ್ಗೆ ಪರಿಶೀಲಿಸಲಾಗುವುದು ಎಂದು ನ್ಯಾಯಾಲಯ ಹೇಳಿದೆ.
Read Moreತೇಜಸ್ವಿ ಸೂರ್ಯ ಒಳ್ಳೆ ಕೆಲಸ ಮಾಡಿದ್ದಾರೆ
ತೇಜಸ್ವಿ ಸೂರ್ಯ ಒಳ್ಳೆ ಕೆಲಸ ಮಾಡಿದ್ದಾರೆ ಆಮ್ಲಜನಕ ಕೊರತೆಯಿಂದ ಇನ್ನು ಮುಂದೆ ಯಾವುದೇ ಸಾವು ರಾಜ್ಯದಲ್ಲಿ ಸಂಭವಿಸದಂತೆ ನೋಡಿಕೊಳ್ಳಿ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಒತ್ತಾಯಿಸಿದ್ದೇನೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಇವತ್ತು ಆಕ್ಸಿಜನ್ ಕೊರತೆಯಿಂದ ಬಹಳಷ್ಟು ಮಂದಿ ಸಾವನ್ನಪ್ಪುತ್ತಿದ್ದಾರೆ. ಈಗಾಗಲೇ 28 ಜನ ಚಾಮರಾಜನಗರದಲ್ಲಿ ಸತ್ತಿದ್ದಾರೆ. 3 ಜನ ಸತ್ತಿದ್ದಾರೆ ಎಂಬ ಸುಧಾಕರ್ ಹೇಳಿಕೆ ಶುದ್ಧ ಸುಳ್ಳು. ತೇಜಸ್ವಿ ಸೂರ್ಯ ಬೆಡ್ ಬ್ಲಾಕಿಂಗ್ ಬಗ್ಗೆ ಹೇಳಿದ್ದಾರೆ. ಇಟ್ಸ್ ಗುಡ್. ಒಳ್ಳೇದೇ ಮಾಡಿದ್ದಾರೆ. ಆಕ್ಸಿಜನ್ ಕೊರತೆ ಆಗದಂತೆ ನೋಡಿಕೊಳ್ಳುವುದು ಸರ್ಕಾರದ ಜವಾಬ್ದಾರಿ ಎಂದರು.
Read Moreಲಿಂಗಸುಗೂರು ಕೆನರಾ ಬ್ಯಾಂಕ್ ಸೀಲ್‌ಡೌನ್..
ಲಿಂಗಸೂಗೂರು(ರಾಯಚೂರು):ಜಿಲ್ಲೆಯ ಲಿಂಗಸುಗೂರು ತಾಲೂಕಿನಲ್ಲಿ ಕೋವಿಡ್-೧೯ ಪ್ರಕರಣ ವರದಿಯಾದ ಬಳಿಕ ಕೆನರಾ ಬ್ಯಾಂಕ್‌ನ ಸೀಲ್‌ಡೌನ್ ಮಾಡಲಾಗಿದ್ದು,ಸಾರ್ವಜನಿಕ ಆಸ್ಪತ್ರೆಯಲ್ಲಿ ಹೊರ ರೋಗಿಗಳ ಸೇವೆ ಸ್ಥಗಿತಗೊಳಿಸಲಾಗಿದೆ. ಕೇರಳ ಮೂಲದ ವ್ಯಕ್ತಿ ನಿರಂತರವಾಗಿ ಲಿಂಗಸುಗೂರು ಕೆನರಾ ಬ್ಯಾಂಕ್‌ನಲ್ಲಿ ವ್ಯವಹಾರ ಮಾಡಿದ್ದಾರೆ.ಅಲ್ಲದೇ ಇವರ ಪ್ರಾಥಮಿಕ ಸಂಪರ್ಕವನ್ನು ಬ್ಯಾಂಕ್ ಸಿಬ್ಬಂದಿ ಹೊಂದಿದ್ದು, ಪರಿಣಾಮ ನಾಲ್ಕು ಸಿಬ್ಬಂದಿಯನ್ನ ಕ್ವಾರಂಟೈನ್ ಮಾಡಿ, ಬ್ಯಾಂಕ್‌ನ ಸಂಪೂರ್ಣ ಸೀಲ್ ಡೌನ್ ಮಾಡಲಾಗಿದೆ. ಇನ್ನು ಕೇರಳ ಸೋಂಕಿತ ಮತ್ತು ಸರ್ಜಾಪುರ ಯುವಕ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಹೀಗಾಗಿ ಇವರಿಗೆ ಚಿಕಿತ್ಸೆ ನೀಡಿದ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಯನ್ನೂ ಕ್ವಾರಂಟೈನ್ ಮಾಡಿ ಸಾರ್ವಜನಿಕ ಆಸ್ಪತ್ರೆಯ ಹೊರ ರೋಗಿಗಳ ಚಿಕಿತ್ಸೆ ಸ್ಥಗಿತಗೊಳಿಸಲಾಗಿದೆ. ಇದೇ ವೇಳೆ ಸಾರ್ವಜನಿಕ ಆಸ್ಪತ್ರೆಗೆ ನಿತ್ಯ ೪೦೦ ರಿಂದ ೫೦೦ ಹೊರ ರೋಗಿಗಳು ಬರುತ್ತಿದ್ದರು. ಇದೀಗ ತುರ್ತು ಚಿಕಿತ್ಸೆ ಹೊರತು ಪಡಿಸಿ ಉಳಿದ ಸೇವೆ ಸ್ಥಗಿತಗೊಳಿಸಿದ್ದಾರೆ. ಬ್ಯಾಂಕ್ ಸಿಬ್ಬಂದಿಯನ್ನು…
Read Moreಧಾರವಾಡದಲ್ಲಿ ಎರಡು ಕೊರೊನಾ ಕೇಸ್
ಧಾರವಾಡ : ಧಾರವಾಡದ ಜಿಲ್ಲೆಯಲ್ಲಿಂದು ಎರಡು ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ. ಪಿ-೩೪೩೬(೪೮ ವರ್ಷ,ಪುರುಷ) ಹಾಗೂ ಪಿ-೩೪೩೭ (೬೬ ವರ್ಷ,ಮಹಿಳೆ)ಈ ಇಬ್ಬರೂ ರಾಜಸ್ಥಾನ ರಾಜ್ಯದ ಅಜ್ಮೀರ್‌ನಿಂದ ಹಿಂದಿರುಗಿರುವ ಪ್ರಯಾಣ ಹಿನ್ನೆಲೆ ಹೊಂದಿದ್ದಾರೆ.ಸಾAಸ್ಥಿಕ ಕ್ವಾರಂಟೈನ್‌ನಲ್ಲಿದ್ದರು ಎಂದು ತಿಳಿಸಿದ್ದಾರೆ. ಇನ್ನು ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ೫೦ಕ್ಕೆ ಏರಿಕೆಯಾಗಿದೆ.ಈಗಾಗಲೇ ೨೬ ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.ಉಳಿದವರು ಹುಬ್ಬಳ್ಳಿಯ ಕಿಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ. ರಾಜು ಮುದ್ಗಲ್ ಎಕ್ಸ್ ಪ್ರೆಸ್ ಟಿವಿ ಹುಬ್ಬಳ್ಳಿ
Read Moreಬೀದಿ ಬದಿ ವ್ಯಾಪಾರಸ್ಥರಿಗೆ ಸಾಲ ಸೌಲಭ್ಯ..
ಶಿರಾ(ತುಮಕೂರು): ಜಿಲ್ಲೆಯ ಶಿರಾ ನಗರದ ಡಿಸಿಸಿ ಬ್ಯಾಂಕ್ ಆವರಣದಲ್ಲಿ ಸಾಲದ ಮೊತ್ತ ಜಮಾ ಮಾಡಿರುವ ಆದೇಶ ಪತ್ರ ವಿತರಣೆ ಕಾರ್ಯಕ್ರಮ ನಡೆಯಿತು. ಅಂದ ಹಾಗೇ ಕಾರ್ಯಕ್ರಮದಲ್ಲಿ ಬ್ಯಾಂಕ್‌ನ ನಿರ್ದೇಶಕ ಜಿ.ಎಸ್.ರವಿ ಬೀದಿ ಬದಿ ವ್ಯಾಪಾರಿಗಳಿಗೆ ನೇರವಾಗಿ ಅವರ ಶೂನ್ಯ ಉಳಿತಾಯ ಖಾತೆಗೆ ಸಾಲದ ಮೊತ್ತ ಜಮಾ ಮಾಡಿರುವ ಆದೇಶ ಪತ್ರಗಳನ್ನು ವಿತರಿಸಿದರು. ಬಳಿಕ ಮಾತನಾಡಿದ ಅವರು,ಲಾಕ್‌ಡೌನ್‌ನಿಂದ ಬೀದಿ ಬದಿ ವ್ಯಾಪಾರಸ್ಥರು ಆರ್ಥಿಕ ಮುಗ್ಗಟ್ಟಿನಿಂದ ಕಷ್ಟಪಡುತ್ತಿದ್ದಾರೆ.ಜೀವನೋಪಾಯಕ್ಕೆ ಅನ್ಯ ಮಾರ್ಗವಿಲ್ಲದೆ ಖಾಸಗಿ ಲೇವಾದೇವಿ ಸಂಸ್ಥೆಯ ಶೋಷಣೆಗೆ ಒಳಗಾಗುತ್ತಿರುವುದನ್ನು ಅರಿತು ಬ್ಯಾಂಕ್ ಆಡಳಿತ ಮಂಡಳಿ ಈ ವ್ಯಾಪಾರಸ್ಥರಿಗೆ ಸಾಲ ನೀಡಲು ತೀರ್ಮಾನ ಕೈಗೊಂಡಿದೆ ಎಂದರು. ಯಾವುದೇ ರೀತಿಯ ಆಧಾರ ಇಲ್ಲದೇ ಬಡವರ ಬಂಧು ಯೋಜನೆಯಡಿ ಸಾಲ ನೀಡಲಾಗುವುದು.ಜಿಲ್ಲೆಯ ೧೦ತಾಲ್ಲೂಕುಗಳನಿರ್ದೇಶಕರು ತಮ್ಮ ವ್ಯಾಪ್ತಿಯ ಬೀದಿ ಬದಿ ವ್ಯಾಪಾರಿಗಳಿಗೆ ತಾವುಗಳೇ ಸಾಲದ ಚೆಕ್ ವಿತರಿಸಬಹುದು.ಇದಕ್ಕೆ ಅಧ್ಯಕ್ಷರನ್ನು ಕಾಯುವ ಅಗತ್ಯವಿಲ್ಲ ಎಂದು ಹೇಳಿದರು. ಈ ವೇಳೆ…
Read Moreಕೆಲವರ ವೈಯಕ್ತಿಕ ಚಟಕ್ಕೆ ಮಂಡ್ಯದ ಮೈಶುಗರ್ ಬಲಿ..
ನಾಗಮಂಗಲ(ಮ0ಡ್ಯ): ಜಿಲ್ಲೆಯ ಕಬ್ಬು ಬೆಳೆಗಾರರ ಆಶಾಕಿರಣವಾಗಿದ್ದ ಮೈಶುಗರ್ ಸಕ್ಕರೆ ಕಾರ್ಖಾನೆಯ ಪುನರಾರಂಭದ ವಿಷಯ ದಿನದಿಂದ ದಿನಕ್ಕೆ ಹೊಸ ಹೊಸ ತಿರುವು ಪಡೆಯುತ್ತಿರುವ ಬೆನ್ನಲ್ಲೆ ಸರ್ಕಾರಿ ಅಥವ ಖಾಸಗೀಕರಣ ಎಂಬ ಜಿಜ್ಞಾಸೆಯಲ್ಲಿರುವ ರೈತಾಪಿ ವರ್ಗಕ್ಕೆ ಹಾಲಿ-ಮಾಜಿ ಜನಪ್ರತಿನಿಧಿಗಳ ಹೇಳಿಕೆಗೆ ತಲೆನೋವಾಗಿ ಪರಿಣಮಿಸುತ್ತಿದೆ. ನಾಗಮಂಗಲ ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಸಚಿವ ಎನ್.ಚೆಲುವರಾಯಸ್ವಾಮಿ ಜಿಲ್ಲೆಯ ಕೆಲ ಜನಪ್ರತಿನಿಧಿಗಳ ವೈಯಕ್ತಿಕ ಚಟದಿಂದ ಮೈಶುಗರ್ ಬಲಿಯಾಗಿದೆ.ಸದ್ಯ ಕಾರ್ಖಾನೆ ಆರಂಭಕ್ಕೆ ಅಡ್ಡಿಪಡಿಸುವ ಮೂಲಕ ಇವರು ಕಂಟಕವಾಗಿರುವುದು ಜಿಲ್ಲೆಯ ರೈತರಿಗೆ ಮಾಡುತ್ತಿರುವ ದ್ರೋಹ ಎಂದು ಜಿಲ್ಲೆಯ ಜೆಡಿಎಸ್ ಶಾಸಕರ ವಿರುದ್ದ ಪರೋಕ್ಷವಾಗಿ ಕಿಡಿಕಾರಿದ್ದಾರೆ. ಇನ್ನು ಜಿಲ್ಲೆಯ ಕೆಲವರು ಏನಾದರೂ ಮಾಡಿ ಕಾರ್ಖಾನೆ ಆರಂಭವಾಗದAತೆ ಸಂಚು ರೂಪಿಸಿಕೊಂಡಿದ್ದಾರೆ.ಆದರೆ ಅದು ಅವರಿಗೆ ಗೌರವವಲ್ಲ.ನಾವು ಆರಂಭ ಮಾಡಲು ಸಾಧ್ಯವಾಗದಿದ್ದರೂ ಪರವಾಗಿಲ್ಲ,ಬೇರೆಯವರು ಆರಂಭ ಮಾಡುತ್ತಿದ್ದಾರಲ್ಲ ಎಂಬುದು ಜನಪ್ರತಿನಿಧಿಗಳಾದವರ ಉದ್ದೇಶವಾಗಿರಬೇಕು.ಆದರೆ ಅದು ನಮ್ಮ ಜಿಲ್ಲೆಯ ಜನಪ್ರತಿನಿಧಿಗಳಲ್ಲಿ ಕಂಡುಬರುತ್ತಿಲ್ಲ. ಜೊತೆಗೆ…
Read Moreರಾಜ್ಯದಲ್ಲಿ ಮೊದಲ ಬಾರಿಗೆ ಹುಬ್ಬಳ್ಳಿಯಲ್ಲಿ ಯಶ್ವಸಿಯಾದ ಪ್ಲಾಸ್ಮಾ ಥೆರಪಿ ಚಿಕಿತ್ಸೆ..
ಹುಬ್ಬಳ್ಳಿ : ಜಗತ್ತನ್ನೇ ತಲ್ಲಣಗೊಳಿಸಿದ ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಕಿಮ್ಸ್ ಮತ್ತೊಂದು ಸಾಧನೆ ಮಾಡಿದೆ.ಕರ್ನಾಟಕ ಭಾಗದ ಸಂಜೀವಿನಿ ಎಂದೇ ಖ್ಯಾತಿ ಪಡೆದ ಕಿಮ್ಸ್ ಆಸ್ಪತ್ರೆಯ ವೈದ್ಯರ ತಂಡ ಯಶಸ್ವಿ ಪ್ಲಾಸ್ಮಾ ಥೆರಪಿ ಚಿಕಿತ್ಸೆ ನೀಡುವಲ್ಲಿ ಯಶಸ್ವಿಯಾಗಿದ್ದಾರೆ. ಕೊವೀಡ್ ಸೊಂಕಿತರನ್ನು ಗುಣಮುಖರನ್ನಾಗಿ ಮಾಡಲು ಪಾಸ್ಮಾ ಥೆರಪಿ ಚಿಕಿತ್ಸೆ ಪ್ರಯೋಗ ಮಾಡಲಾಗಿತ್ತು.ಆದರೆ ಹಲವೆಡೆ ಪ್ಲಾಸ್ಮಾ ಥೆರಪಿ ಚಿಕಿತ್ಸೆ ವಿಫಲವಾದ ನಂತರ ಇದೀಗ ರಾಜ್ಯದಲ್ಲಿ ಮೊದಲ ಭಾರಿಗೆ ಹುಬ್ಬಳ್ಳಿಯಲ್ಲಿ ಪಾಸ್ಮಾ ಥೆರಪಿ ಚಿಕಿತ್ಸೆ ಯಶ್ವಸಿಯಾಗಿದೆ. ಹುಬ್ಬಳ್ಳಿಯ ಕೋವಿಡ ಸೊಂಕಿತ ಪಿ-೩೬೩ರಿಂದ ಪ್ಲಾಸ್ಮಾ ಡೋನೇಟ್ ಪಡೆದು ಮುಂಬೈನಿAದ ರಾಜ್ಯಕ್ಕೆ ವಾಪಸ್ ಆಗಿದ್ದ ಪಿ-೨೭೧೦ಗೆ ಪ್ಲಾಸ್ಮಾ ಥೆರಪಿ ಮಾಡಿ ವೈದ್ಯರ ತಂಡ ಯಶಸ್ಸು ಸಾಧಿಸಿದೆ.ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ವೈದ್ಯರ ಈ ಸಾಧನೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಕಿಮ್ಸ್ನಲ್ಲಿ ಪ್ಲಾಸ್ಮಾ ಥೆರಪಿ ಚಿಕಿತ್ಸೆಗೆ ನೀಡಲು ಐಸಿಎಂಆರ್ ನಿಂದ ಅನುಮತಿ ನೀಡಿದ್ದು,ರಾಜ್ಯದಲ್ಲಿ ಹುಬ್ಬಳ್ಳಿಯ ವೈದ್ಯಕೀಯ ಶಿಕ್ಷಣ…
Read More